ಉ.ಕ.ಬಂದ್ ಕೈಬಿಡಲು ಮನವಿ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಆ. ೧- ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ನಾಳೆ ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಅನ್ನು ಕೈ ಬಿಡುವಂತೆ ಜೆಡಿಎಸ್‌ನ ಮಾಜಿ ಶಾಸಕ ಎನ್.ಎಚ್.,ಕೋನ ರೆಡ್ಡಿ ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಗಾರರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧವೆಂದು ಹೇಳಿ ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸುವ ಭರವಸೆ ನೀಡಿದ್ದಾರೆ.
ಹಾಗಾಗಿ ಉತ್ತರ ಕರ್ನಾಟಕ ಬಂದ್ ಅನ್ನು ಕೈ ಬಿಡುವಂತೆ ಅವರು ಸುದ್ದಿ ಗೋಷ್ಠಿಯಲ್ಲಿಂದು ಮನವಿ ಮಾಡಿದರು.
ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟದ ಹಿಂದೆ ಬಿಜೆಪಿಯ ಕುಮ್ಮುಕ್ಕು ಕಾಣುತ್ತಿದೆ. ಹಾಗಾಗಿ ಬಿಜೆಪಿ ನಾಯಕರು ಪ್ರತ್ಯೇಕ ಉತ್ತರ ಕರ್ನಾಟಕದ ಬಗ್ಗೆ ತಮ್ಮ ನಿಲುವನ್ನು ಪುನರ್ ಉಚ್ಛಾರ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಬೆಳಗಾವಿಯ ಸುರ್ವಣ ಸೌಧದ ಮುಂದೆ ನಿನ್ನೆ ನಡೆದ ಸ್ವಾಮೀಜಿಗಳ ಹೋರಾಟ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲೇ ಪ್ರತ್ಯೇಕ ರಾಜ್ಯ ಧ್ವಜ ಹಾರಿಸಲು ಪ್ರಯತ್ನ ನಡೆಸಿರುವುದು ಖಂಡನೀಯ ಇದಕ್ಕೆ ಅವರು ಆಸ್ಪಾದ ಕೊಡಬಾರದೆಂದು ಅವರು ಹೇಳಿದರು.,
ಬಿಜೆಪಿಯ ಶಾಸಕರಾದ ಉಮೇಶ್ ಕತ್ತಿ, ಶ್ರೀರಾಮುಲು, ಜೆ.ಎಚ್.ಪಾಟೀಲ್ ನರಹಳ್ಳಿ ಇವರು ಪ್ರತ್ಯೇಕ ಉತ್ತರ ಕರ್ನಾಟಕದ ಬಗ್ಗೆ ತಮ್ಮದೇ ಆದ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಯಡಿಯೂರಪ್ಪ ಅವರು ಶಾಸಕರುಗಳಿಗೆ ಮಾತನಾಡದಂತೆ ತಾಕೀಖು ಮಾಡಬೇಕೆಂದು ಒತ್ತಾಯಿಸಿದರು.
ಯಾವುದೇ ಸರ್ಕಾರಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿಲಿಲ್ಲ. ಜನತಾ ಪಕ್ಷ, ದಳ, ಸರ್ಕಾರ ಇದ್ದಾಗ ಉತ್ತರ ಕರ್ನಾಟಕದ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಯಾವ ಯಾವ ಸರ್ಕಾರಗಳು ಉತ್ತರ ಕರ್ನಾಟಕದ ಬಗ್ಗೆ ಏನು ಮಾಡಿದ್ದಾರೆ ಎಂಬ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಅವರು ಒತ್ತಾಯಿಸಿದರು.

Leave a Comment