ಎಲ್ಲರಿಗೂ ನಮಸ್ಕಾರ ಎಂದ ಮೋದಿ

 

ವಾರಣಾಸಿ, ಫೆ ೧೬-ಎಲ್ಲರಿಗೂ ನಮಸ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಹೇಳಿದ ಘಟನೆ ವಾರಣಾಸಿಯಲ್ಲಿ ನಡೆದಿದೆ.

ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆಯುತ್ತಿರುವ ಶ್ರೀ ಜಗದ್ಗುರು ಗುರುಕುಲ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಮಾತು ಆರಂಭಿಸಿ, ಎಲ್ಲರಿಗೂ ನಮಸ್ಕಾರ, ವೇದಿಕೆ ಮೇಲಿನ ವೀರಶೈವ ಲಿಂಗಾಯತ ಧರ್ಮದ ಪಂಚಪೀಠದ ಜಗದ್ಗುರುಗಳಿಗೆ ನಮಸ್ಕಾರಗಳು ಎಂದು ಹೇಳಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ಮಠಾಧಿಪತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Leave a Comment