ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ

ಬೆಂಗಳೂರು, ಮಾ ೧೫- ಇನ್ನೇನು ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಪರೀಕ್ಷಾ ಕ್ಷೇಂದ್ರಗಳ ಸುತ್ತಮುತ್ತಲಿನಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ. ಮಾ ೨೧ ರಿಂದ ಏ ೪ ರ ವರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳಿಗೆ ನಿಷೇಧ ಹೇರಲಾಗಿದ್ದು, ಬೆಳಗ್ಗೆ ಪರೀಕ್ಷೆಗಳಿದ್ದಾಗ ಬೆಳಗ್ಗೆ ೮.೩೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನ ೧ ರಿಂದ ೬ ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

Leave a Comment