ಏಷ್ಯಾ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಗೆ ಚಾಲನೆ

(ನಮ್ಮ ಪ್ರತಿನಿಧಿಯಿಂದ)

ಬೆಂಗಳೂರು, ಮೇ ೧೭ – ನಗರದಲ್ಲಿ ನಡೆಯಲಿರುವ ಏಷ್ಯಾ ಹಿರಿಯ ಮಹಿಳಾ ಬಾಸ್ಕೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡ್ರಾ ಎತ್ತುವ ಮೂಲಕ ಚಾಲನೆ ನೀಡಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಡ್ರಾ ಎತ್ತುವ ಮೂಲಕ ಏಷ್ಯಾ ಹಿರಿಯ ಮಹಿಳಾ ಬಾಸ್ಕೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು.

ಭಾರತದ ಬಾಸ್ಕೆಟ್ ಬಾಲ್ ಫೆಡರೇಷನ್ ಈ ಪಂದ್ಯಾವಳಿಗಳನ್ನು ಆಯೋಜಿಸಿದ್ದು, ಪಂದ್ಯ ಈ ಬಾರಿಯ ಏಷ್ಯಾ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಗರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಬಾಸ್ಕೆಟ್ ಬಾಲ್ ಫೆಡರೇಷನ್‌ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment