ಐಸಿಸಿ ಟಿ20 ವಿಶ್ವ ಕಪ್ 2020 ಮುಂದೂಡಿಕೆ ಸಾಧ್ಯತೆ

ನವದೆಹಲಿ, ಮೇ 27-ಆಸ್ಟ್ರೇಲಿಯಾದಲ್ಲಿ ಈ ವರ್ಷ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯನ್ನು 2022ಕ್ಕೆ ಮುಂದುಡೂವ ಸಾಧ್ಯತೆಗಳಿವೆ. ಈ ಮಧ್ಯೆ ಅಕ್ಟೋಬರ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆಯೋಜನೆಗೆ ಚಿಂತನೆ ನಡೆದಿದೆ.ಟಿ20 ವಿಶ್ವಕಪ್ ಮುಂದೂಡುವುದು ಹಾಗೂ ಅಕ್ಟೋಬರ್ ನಲ್ಲಿ ಐಪಿಎಲ್ ನಡೆಸುವ ಬಗ್ಗೆ ಈಗಾಗಲೇ ತೀರ್ಮಾನ ಕೈಗೊಂಡಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಇದೆ ಎಂದು ಐಸಿಸಿಯ ಉನ್ನತ ಮೂಲಗಳು ತಿಳಿಸಿವೆ.
ಗುರುವಾರ ಐಸಿಸಿ ಮಂಡಳಿ ಸಭೆ ನಡೆಯಲಿದ್ದು, ವಿಶ್ವಕಪ್ ಮುಂದೂಡಿಕೆ, ಕೋವಿಡ್ -19 ಹಿನ್ನೆಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳು ಪುನರಾರಂಭ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ಈ ಪರಿಸ್ಥಿತಿಯಲ್ಲಿ ಟೂರ್ನಿ ನಡೆಯುವ ಸಾಧ್ಯತೆಗಳು ತೀರಾ ಕಡಿಮೆ. ಕ್ರಿಕೆಟ್ ಆಸ್ಟ್ರೇಲಿಯಾ ಸೇರಿದಂತೆ ಇತರ ಕ್ರಿಕೆಟ್ ಮಂಡಳಿಗಳೂ ಟೂರ್ನಿ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾರವು ಎಂದು ಐಸಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.ಒಂದು ವೇಳೆ ಟಿ20 ವಿಶ್ವ ಕಪ್ ಮುಂದೂಡಿಕೆಯಾದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸರಣಿ ಸುಗಮವಾಗಿ ನಡೆಯುವ ನಿರೀಕ್ಷೆಯೂ ಇದೆ.

Share

Leave a Comment