ಐಸ್‌ಕ್ರೀಂ ವಾಹನದಲ್ಲೂ ಗೋಸಾಗಾಟ! ಆರೋಪಿಗಳು ವಾಹನ ಬಿಟ್ಟು ಪರಾರಿ

ವಿಟ್ಲ, ಜು.೧೮- ಐಸ್ ಕ್ರೀಂ ಸಾಗಾಟ ಮಾಡುವ ವಾಹನದಲ್ಲಿ ಗೋ ಸಾಗಾಟ ನಡೆಸುತ್ತಿದ್ದ ಘಟನೆಯೊಂದು ವಿಟ್ಲದ ಕೊಳ್ನಾಡು ಗ್ರಾಮದ ಸಾಲೆತ್ತೂರು ಜಂಕ್ಷನ್ ಬಳಿ ಪತ್ತೆಯಾಗಿದೆ. ಐಸ್ ಕ್ರೀಂ ಸಾಗಾಟದ ಟೆಂಪೋದಲ್ಲಿ ಗೋ ಸಾಗಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗೋವುಗಳು ಹಾಗೂ ೧ ಕರುವನ್ನು ರಕ್ಷಿಸಲಾಗಿದೆ. ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳು ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಹುಡುಕಾಟ ಮುಂದುವರೆಸಲಾಗಿದೆ.

Leave a Comment