ಒಂದು ತಿಂಗಳೊಳಗೆ ಕಾಮಗಾರಿ ಮುಗಿಸಲು ಸೂಚನೆ

ಮೈಸೂರು.ಫೆ.28. ಜಿಲ್ಲಾಡಳಿತದ ವತಿಯಿಂದ ಚಾಮುಂಡಿಬೆಟ್ಟದಲ್ಲಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆಗಳ ಕಾಮಗಾರಿಯನ್ನು ಇನ್ನು ಒಂದು ತಿಂಗಳೊಳಗೆ ಮುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ಇತ್ತರು.
ಅವರು ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಿದ್ಧಿಗಾರರೊಂದಿಗೆ ಮಾತನಾಡುತ್ತಾ, ಬೆಟ್ಟದಲ್ಲಿ ನಿರ್ಮಿಸಲಾಗುತ್ತಿರು ಅಂಗಡಿ ಮಳಿಗೆಗಳ ಕಾಮಗಾರಿ ಇನ್ನು ಒಂದು ತಿಂಗಳಲ್ಲಿ ಮುಕ್ತಾಯಗೊಳ್ಳುವ ವಿಶ್ವಾಸ ಹೊಂದಿದ್ದೇನೆ. ಈ ದಿಸೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತಷ್ಟು ಚುರುಕಿನಿಂದ ಕಾರ್ಯಪ್ರವೃತ್ತರಾಗಿ ಬಾಕಿ ಉಳಿದಿರುವ ಎಲ್ಲಾ ರೀತಿಯ ಕಾಮಗಾರಿಗಳನ್ನು ಮುಂದಿನ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಿ, ಮಳಿಗೆಗಳನ್ನು ವ್ಯಾಪರಸ್ಥರಿಗೆ ನೀಡುವಂತಾಗಬೇಕು, ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ತಾವು ಹಿಂದು ಮುಂದು ನೋಡುವುದಿಲ್ಲವೆಂಬ ಎಚ್ಚರಿಕೆಯನ್ನು ನೀಡಿದರು.
ಬೆಟ್ಟಕ್ಕೆ ಆಗಮಿಸಿದ ಜಿಲ್ಲಾಉಸ್ತುವಾರಿ ಸಚಿವರೊಂದಿಗೆ ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ಅಭಿತಾಮ್ ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ವಂತ, ಪಾಲಿಕೆ ಆಯುಕ್ತ ಗುರುರಾಜ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Leave a Comment