ಒತ್ತಾಯಪೂರ್ವಕ ಬಂದ್ ಮಾಡಿದರೆ ಕ್ರಮ : ಎಸ್ಪಿ

 

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಸೆ.9-ವಿವಿಧ ಸಂಘಟನೆಗಳು ನಾಳೆ ಭಾರತ ಬಂದ್ ಗೆ ಕರೆ ನೀಡಿದ್ದು, ಒತ್ತಾಯಪೂರ್ವಕವಾಗಿ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಎಚ್ಚರಿಸಿದ್ದಾರೆ.

“ಸಂಜೆವಾಣಿ”ಯೊಂದಿಗೆ ಮಾತನಾಡಿದ ಅವರು ನಾಳೆ ಕರೆ ನೀಡಿರುವ ” ಭಾರತ ಬಂದ್” ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರವು ಸೇರಿದಂತೆ ಜಿಲ್ಲೆಯಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಬಂದ್ ಹಿನ್ನೆಲೆಯಲ್ಲಿ 4 ಕೆ.ಎಸ್.ಆರ್.ಪಿ., 16 ಡಿ.ಆರ್., ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಗಳನ್ನು ಬಂದೋಬಸ್ತ್ ಗಾಗಿ ನಿಯೋಜನೆ ಮಾಡಲಾಗುತ್ತಿದೆ.

ಬಂದ್ ಕರೆ ನೀಡಿರುವ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸಿದರೆ ತೊಂದರೆಯಿಲ್ಲ. ಒತ್ತಾಯಪೂರ್ವಕವಾಗಿ ಬಂದ್ ಮಾಡಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ಎಡ ಪಕ್ಷಗಳು ನಾಳೆ ಭಾರತ ಬಂದ್ ಗೆ ಕರೆ ನೀಡಿವೆ.

Leave a Comment