ಕಟೀಲಿಗೆ ರವಿಶಂಕರ್ ಗುರೂಜಿ ಭೇಟಿ

ಮಂಗಳೂರು, ಡಿ.೭- ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಬುಧವಾರ ಭೇಟಿ ನೀಡಿದ್ದರು. ತಮ್ಮ ಅನುಯಾಯಿಗಳೊಂದಿಗೆ ನಿನ್ನೆ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ರವಿಶಂಕರ್ ಗುರೂಜಿ ದೇವಿಯ ಮಹಾಪೂಜೆಯನ್ನು ವೀಕ್ಷಿಸಿ, ದೇವಾಲಯದಲ್ಲಿಯೇ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ವೆಂಕಟರಮಣ ಆಸ್ರಣ್ಣ, ಕುಮಾರ ಆಸ್ರಣ್ಣ, ಶ್ರೀಹರಿ ಆಸ್ರಣ್ಣ ಸೇರಿದಂತೆ ದೇವಸ್ಥಾನದ ಸಿಬ್ಬಂದಿ ದೇವಸ್ಥಾನದ ವಿವಿಧ ಕಾರ್ಯಕ್ರಮಗಳ ಬಗ್ಗೆ ಅವರಿಗೆ ವಿವರಿಸಿದರು.

Leave a Comment