ಕನಿಷ್ಟ ವೇತನಕ್ಕೆ ಒತ್ತಾಯಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

ದಾವಣಗೆರೆ, ಮಾ.20- ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪದಾಧಿಕಾರಿಗಳಿಂದು ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಬಜೆಟ್ ನಲ್ಲಿ ಬಿಸಿಯೂಟ ತಯಾರಕರ ವೇತನ ಹೆಚ್ಚಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕಳೆದ 14 ವರ್ಷಗಳಿಂದ ದುಡಿಯುತ್ತಿರುವ ನಮ್ಮ ಮನವಿಯನ್ನು ಪರಿಶೀಲಿಸಿ ವೇತನ ಹೆಚ್ಚಳ ಮಾಡಬೇಕು. ಪ್ರತಿ ತಿಂಗಳು 5 ನೇ ತಾರೀಕು ವೇತನ ವಿತರಿಸಬೇಕು.

 ತಮಿಳುನಾಡು ರಾಜ್ಯದ ಮಾದರಿಯಲ್ಲಿ ಬಿಸಿಯೂಟ ಕಾರ್ಮಿಕರನ್ನು ಅರೆಕಾಲಿಕ ಕಾಯಂ ನೌಕರರೆಂದು ಪರಿಗಣಿಸಬೇಕು. ಕೆಲಸದ ಭದ್ರತೆ ಒದಗಿಸಬೇಕು. ಇ ಎಸ್ಐ, ಪಿಎಫ್, ನಿವೃತ್ತಿ ವೇತನ ಜಾರಿಗೊಳಿಸಬೇಕು. ಮೂಲಕೈಪಿಡಿಯಲ್ಲಿರುವಂತೆ ಮಕ್ಕಳ ಸಂಖ್ಯೆಗನುಗುಣವಾಗಿ ಅಡುಗೆ ಸಿಬ್ಬಂದಿ ನೇಮಕ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಂ ಆವರಗೆರೆ ಚಂದ್ರು, ಕಾಂ.ಮಹಮದ್ ಬಾಷಾ, ರುದ್ರಮ್ಮ ಬೆಳಲಗೆರೆ, ಸರೋಜಾ, ಪುಷ್ಪ, ಜ್ಯೋತಿಲಕ್ಷ್ಮಿ, ಜಯಮ್ಮ, ಬೋಮ್ಮಕ್ಕ, ಪ್ರಮೀಳಾ ಮತ್ತಿತರರಿದ್ದರು.

Leave a Comment