ಕನ್ನಡಪರ ಸಂಘಟನೆಗಳ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಲು ಆಗ್ರಹ

ತುಮಕೂರು, ಜ. ೧೧- ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಕನ್ನಡ ಸಂಘಟನೆಗಳು ಕಾರ್ಯಕ್ರಮ ನಡೆಸಲು ಅವಕಾಶ ಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸ್ವಾಭಿಮಾನಿ ಬಣ ಘಟಕದ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಳೆದ ಡಿಸೆಂಬರ್ 21 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮಾಡಲು ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಅನುಮತಿ ಕೋರಿ ಪ್ರಾಚಾರ್ಯರಿಗೆ ಮನವಿ ಪತ್ರ ಸಲ್ಲಿಸಿ ಕೋರಲಾಗಿತ್ತು. ಆದರೆ, ಪ್ರಾಚಾರ್ಯರು ಅನುಮತಿ ನೀಡಿರಲಿಲ್ಲ. ಬಳಿಕ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಕಾರ್ಯಕ್ರಮ ಮಾಡಲಾಗಿತ್ತು. ಆದರೆ ಈಗ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಖಾಸಗಿ ವಾಹಿನಿ ಕಾರ್ಯಕ್ರಮ ನಡೆಸಲು ಪ್ರಾಚಾರ್ಯರು ಅನುಮತಿ ನೀಡಿರುವುದು ಖಂಡನೀಯ ಎಂದರು.

ಕನ್ನಡ ಸಂಘಟನೆಗಳಿಗೆ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಕೊಡಬೇಕೆಂದು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡ ಧನಿಯಾಕುಮಾರ್, ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಟಿ. ಯಲ್ಲೇಶಗೌಡ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ದಿವಾಕರ್, ನಗರ ಘಟಕದ ಅಧ್ಯಕ್ಷ ವಿ.ಎಲ್. ಆನಂದ್ ಮತ್ತಿತರರು ಪಾಲ್ಗೊಂಡಿದ್ದರು.

Leave a Comment