ಕರ್ನಾಟಕದಲ್ಲಿ ಕೃಷಿ ಉತ್ಪಾದನೆ ಕುಂಠಿತ : ಬೇಳೆಕಾಳುಗಳ ಉತ್ಪಾದನೆಯಲ್ಲಿ ತೀವ್ರ ಕುಸಿತ

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಮಾ.20-ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ, ಹವಮಾನ ವೈಪ್ಯರಿತ್ಯ ಸೇರಿದಂತೆ ಮತ್ತಿತರ ಕಾರಣಗಳಿಂದ ಈ ಬಾರಿ ಕೃಷಿ ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಮಳೆ ಸಮಯಕ್ಕೆ ಸರಿಯಾಗಿ ಆಗದೇ ಇರುವುದು ಅದರಲ್ಲೂ ವಿಶೇಷವಾಗಿ ಈ ವರ್ಷದ ಆಗಸ್ಟ್ ನಿಂದ ನವೆಂಬರ್ ವರೆಗೆ ರಾಜ್ಯದ ಬಹುತೇಕ ಕಡೆ ಸಕಾಲಕ್ಕೆ ಮಳೆಯಾಗದೇ ಇರುವುದು ಕೃಷಿ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೃಷಿ ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಇದರಿಂದ ಆಹಾರ ಧಾನ್ಯಗಳ ಕೊರತೆ ಉಂಟಾಗಲಿದೆ.

ಈ ವರ್ಷ 124 ಲಕ್ಷ ಟನ್ಸ್ ಕೃಷಿ ಉತ್ಪಾದನೆ ಗುರಿ ಹೊಂದಲಾಗಿತ್ತು. ಆದರೆ ಒಂದು ಅಂದಾಜಿನ ಪ್ರಕಾರ 76.46 ಲಕ್ಷ ಟನ್ ಮಾತ್ರ ಉತ್ಪಾದನೆಯಾಗಿದೆ. 16 ಲಕ್ಷ ಟನ್ ಬೇಳೆಕಾಳು ಉತ್ಪಾದನೆ ಗುರಿ ಹೊಂದಲಾಗಿತ್ತು. ಆದರೆ ಅದರ ಅರ್ಧದಷ್ಟು ಮಾತ್ರ ಅಂದರೆ 13.55 ಲಕ್ಷ ಟನ್ ಮಾತ್ರ ಉತ್ಪಾದನೆ ಆಗುವ ನಿರೀಕ್ಷೆ ಇದೆ.

ಎಣ್ಣೆಕಾಳು 15 ಲಕ್ಷಟನ್ ಉತ್ಪಾದನೆಯಾಗುವ ನಿರೀಕ್ಷೆಯಿತ್ತು. ಅದರೆ ಅರ್ಧಕ್ಕಿಂತ ಕಡಿಮೆ ಅಂದರೆ, 7.15 ಲಕ್ಷ ಟನ್ ಮಾತ್ರ ಉತ್ಪಾದನೆಯಾಗುವ ನಿರೀಕ್ಷೆ ಇದೆ.

ಹತ್ತಿ 16.50 ಲಕ್ಷ ಬೇಲ್ಸ್ ಆಗುವ ಗುರಿ ಇತ್ತು. ಉತ್ಪಾದನೆ ಮಾತ್ರ 10.45 ಬೇಲ್ಸ್ ಆಗಬಹುದೆಂಬ ನಿರೀಕ್ಷೆ ಇದೆ.

ಕಳೆದ ವರ್ಷ ಏಕದಳ 40.07 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. 85.92 ಲಕ್ಷ ಟನ್ ಉತ್ಪಾದನೆಯಾಗಿತ್ತು. ಈ ವರ್ಷ 44.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು, 77.53 ಲಕ್ಷ ಟನ್ ಉತ್ಪಾದನೆಯಾಗಿತ್ತು. ಇದರಿಂದ ರಾಜ್ಯದ ಜನತೆ ಈ ಬಾರಿ ಆಹಾರ ಪೂರೈಕೆಯ ತೀವ್ರ ಅಭಾವ ಎದುರಿಸುವ ಸಾಧ್ಯತೆಗಳಿವೆ.

Leave a Comment