ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕಾರ

 

ಬೆಂಗಳೂರು, ಜ 02 ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕರಿಸಿದ್ದಾರೆ

ನಗರದ ನಂದಿನಿ ಲೇಔಟ್ ನಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಈ ಅಧಿಕಾರ ಸ್ವೀಕಾರ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ನೆರೆವೇರಿದೆ. ನಿರ್ದೇಶಕ, ನಿರ್ಮಾಪಕ ಮತ್ತು ನಟ ಸುನಿಲ್ ಪುರಾಣಿಕ್ ಅವರನ್ನು ಕರ್ನಾಟಕ ಫಿಲ್ಮ್ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಪುರಾಣಿಕ್ ಅವರು ಕನ್ನಡ, ತೆಲುಗು, ತಮಿಳು, ಮತ್ತು ಮಲಯಾಳಂ ಸೇರಿದಂತೆ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮತ್ತು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಕರ್ನಾಟಕ ರಾಜ್ಯೋತ್ಸವ ಮತ್ತು ಕೆಂಪೇಗೌಡ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Leave a Comment