ಕಲಬುರಗಿ: ಟ್ರಾಮಾ ಸೆಂಟರ್ ಡಿಸೆಂಬರ್ ಅಂತ್ಯದೊಳಗೆ ಕಾರ್ಯಾರಂಭ

 

ಕಲಬುರಗಿ,ಜೂ.18-ಅಪಘಾತಕ್ಕೆ ತುತ್ತಾದವರಿಗೆ ತುರ್ತು ಚಿಕಿತ್ಸೆ ನೀಡುವ ಸಂಬಂಧ ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪಿಸಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಇದು ಕಾರ್ಯಾರಂಭ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್.ಪಾಟೀಲ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ ತಿಳಿಸಿದರು.

ಜಿಲ್ಲಾ ಆಸ್ಪತ್ರೆ, ಜಿಮ್ಸ್, ಜಯದೇವ ಹೃದ್ರೋಗ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಶೀಘ್ರವೇ ಆರಂಭಿಸಲಾವುದು ಎಂದು ತಿಳಿಸಿದರು.

ಜೀಮ್ಸ್ ನಲ್ಲಿ ನಾಯಿ ಕಡೆತಕ್ಕೆ ಔಷಧಿ ಕೊರತೆ ಇರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ನಾಯಿ ಕಡಿತಕ್ಕೆ ಔಷಧಿ ಕೊರತೆ ಇರುವುದು ನಿಜ. ಕೇಂದ್ರದಿಂದಲೇ ಸರಿಯಾದ ರೀತಿಯಲ್ಲಿ ಸರಬರಾಜು ಆಗುತ್ತಿಲ್ಲ. ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಔಷಧಿ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

@12bc = ತರಾಟೆ

ಮೊದಲಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಆಸ್ಪತ್ರೆಯ ಸ್ವಚ್ಛತೆಗೆ ಆದ್ಯತೆ ನೀಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡದೇ ಇರುವುದಕ್ಕೆ ವೈದ್ಯಾಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಮತ್ತು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಅವರು ಜಿಮ್ಸ್ ನಲ್ಲಿ ಗೌರ್ನಿಂಗ್ ಕೌನ್ಸಿಲ್ ಮೀಟಿಂಗ್ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಮ್ಸ್ ನಿರ್ದೇಶಕ ಉಮೇಶ್, ಜಯದೇವ ಆಸ್ಪತ್ರೆಯ ವೈದ್ಯರು ಈ ವೇಳೆ ಉಪಸ್ಥಿತರಿದ್ದರು.

Leave a Comment