ಕಲ್ಯಾಣ ಕರ್ನಾಟಕದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಆದ್ಯತೆ –  ಲಕ್ಷ್ಮಣ ಸವದಿ

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು 100 ಕೋಟಿ ರೂ.ಮೀಸಲಿಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ,ಕೃಷಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಹಂಪಿ ಉತ್ಸವ 2020 ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೇಶ ಮತ್ತು ನಾಡಿನ ಅಭಿವೃದ್ಧಿಗೆ ದುಡಿಯುತ್ತಿರುವ ಜೋಡೆತ್ತುಗಳು ಎಂದು ಬಣ್ಣಿಸಿದ ಅವರು , ಹಂಪಿ ಉತ್ಸವದ ಅದ್ದೂರಿ ಮತ್ತು ಅರ್ಥಪೂರ್ಣ ಅಚರಣೆಗೆ ಸರ್ಕಾರ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದೆ ಎಂದರು.

Leave a Comment