ಕಾಂಗ್ರೆಸ್‍ಗೆ ಅಂಬಿ ಗುಡ್ ಬೈ

ಮಂಡ್ಯ, ನ.14 – ಮಾಜಿ ಸಚಿವ ಹಾಗೂ ಚಲನಚಿತ್ರ ನಟ ಅಂಬರೀಷ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳುವ ಸಾಧ್ಯತೆಗಳು ನಿಶ್ಚಳವಾಗಿದೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂಬರೀಷ್ ಈ ನಿರ್ಧಾರಕ್ಕೆ ಬಂದಿದ್ದಾರೆಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ.
ಕಾಂಗ್ರೆಸ್ ತೊರೆಯಲಿರುವ ಅಂಬರೀಷ್ ಜೆಡಿಎಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದು, ಈಗಾಗಲೇ ಆ ಪಕ್ಷದ ಹಿರಿಯ ನಾಯಕರೊಡನೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಟಿ ರಮ್ಯ ಅವರನ್ನು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ನಟ ಅಂಬರೀಷ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Comment