ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ ಹೆಬ್ಬಾಳ ರಾಜೀನಾಮೆ

ಕಲಬುರಗಿ,ಜು.17- ಕಾಂಗ್ರೆಸ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರು ರಾಜೀನಾಮೆ ನೀಡಿದ್ದಾರೆ.
ಚಿತ್ತಾಪೂರ ವಿಧಾನ ಸಭಾ ಮತಕ್ಷೇತ್ರದ ಮಾಜಿ ಶಾಸಕರು ಹಾಗೂ ಕಾಂಗ್ರೆಸ ಪಕ್ಷದ ಹಿರಿಯ ಮುಖಂಡರಾಗಿರುವ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರು, ತಮ್ಮ ರಾಜೀನಾಮೆ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತಮ್ಮೊಂದಿಗೆ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜೀನಾಮೆಗೆ ಏನು ಕಾರಣ ಎಂಬ ಪ್ರಶ್ನೆಗೆ ವಿವರಣೆ ನೀಡಲು ನಿರಾಕರಿಸಿದ ಹೆಬ್ಬಾಳ ಅವರು, ಸೂಕ್ತ ಸಮಯದಲ್ಲಿ ತಮ್ಮ ರಾಜೀನಾಮೆಯ ಕಾರಣ ಹಾಗೂ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಬಹಿರಂಗ ಪಡಿಸುವುದಾಗಿ ಸಂಜೆವಾಣಿಗೆ ಅವರು ತಿಳಿಸಿದರು.

Leave a Comment