ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ದಾವಣಗೆರೆ,ಆ,11;ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರು ಆಯ್ಕೆ ಆಗಿರುವುದಕ್ಕೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಿ.ಬಸವರಾಜ್ ಸಂತಸ ವ್ಯಕ್ತಪಡಿಸಿ ಸೋನಿಯಾ ಗಾಂಧಿಯವರನ್ನು ಅಭಿನಂದಿಸಿದ್ದಾರೆ. ಸೋನಿಯಾ ಗಾಂಧಿಯವರು ಈ ಹಿಂದೆ ಕಾಂಗ್ರೆಸ್ ಸಂಕಷ್ಟದಲ್ಲಿದ್ದ ಕಾಲದಲ್ಲಿ ರಾಜಕಾರಣಕ್ಕೆ 1998ರಲ್ಲಿ ಪ್ರವೇಶಿಸಿ 19 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೇಂದ್ರದಲ್ಲಿ 2 ಬಾರಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲು ಶ್ರಮಿಸಿದ್ದರು. ಅವರು ಕಾಂಗ್ರೆಸ್ ಅಧ್ಯಕ್ಷರಾದ ಸಂದರ್ಭದಲ್ಲಿ ರಾಷ್ಟ್ರದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. 134 ವರ್ಷಗಳ ಇತಿಹಾಸ ಇರುವ, ದೇಶಕ್ಕೆ ಸ್ವಾತಂತ್ರಕ್ಕೆ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೋನಿಯಾಗಾಂಧಿಯವರು ಪುರ್ನರ್ ಆಯ್ಕೆ ಆಗಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಿಮ್ಮಡಿ ಹುಮ್ಮಸ್ಸು ತಂದಿದೆ ಎಂದು ಅವರು ತಿಳಿಸಿದ್ದಾರೆ.ಸೋನಿಯಾಗಾಂಧಿಯವರು ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿ ಆಗಿದ್ದು ಎರಡು ಬಾರಿ ತಮಗೆ ಅನಾಯಸವಾಗಿ ದೊರೆತಿದ್ದ ಪ್ರಧಾನಮಂತ್ರಿ ಹುದ್ದೆಯನ್ನು ತ್ಯಾಗ ಮಾಡಿದ ತ್ಯಾಗಮಹಿ ಆಗಿದ್ದಾರೆ. ಶ್ರೀಮತಿ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿ ನಂತರ ಕಾಂಗ್ರೆಸ್ ಅಧಿಕಾರಕ್ಕೆ ತರಲು ಬಹಳ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಯುಪಿಎ ಅಧ್ಯಕ್ಷರಾಗಿ ಸರ್ಕಾರಕ್ಕೆ ಉತ್ತಮ ಸಲಹೆ ನೀಡುವ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ದೇಶದ ಅಭಿವೃದ್ಧಿಗೆ ಉತ್ತಮ ಮಾರ್ಗದರ್ಶನ ನೀಡಿ, ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು ಮತ್ತು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳ್ಳಲು ಕಾರಣರಾಗಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇದೀಗ ಪುನ: ಕಾಂಗ್ರೆಸ್ ಉನ್ನತ ಹುದ್ದೆ ವಹಿಸಿಕೊಂಡಿದ್ದು ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಮತ್ತು ಶಕ್ತಿ ಬರಲಿದೆ. ಹಂಗಾಮಿ ಅಧ್ಯಕ್ಷರಾಗಿರುವ ಅವರು ಮುಂದಿನ ದಿನಗಳಲ್ಲಿಯೂ ಸಹ ಅವರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ದೇಶವನ್ನು ಮುನ್ನಡೆಸಲಿ ಎಂದು ಹೇಳಿದರು.

Leave a Comment