ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಸಭೆ

ಹೊಸಪೇಟೆ.ಮಾ.12 ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಸಭೆ ಜರುಗಿತು.
ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಾಣೆ ದೃಷ್ಟಿಯಿಂದ ಪಕ್ಷದ ಸಂಘಟನೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹಾಗೂ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು ಇದೇ ಸಂದರ್ಭದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ತಾಲೂಕು ಘಟಕದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಮುಖಂಡರಾದ ಗುಜ್ಜಲ ನಾಗರಾಜ, ನಿಂಬಗಲ್ ರಾಮಕೃಷ್ಣ, ಭಾಗ್ಯಲಕ್ಷ್ಮಿ ಭರಾಡೆ, ಹಬೀಬ್ ರೆಹಮಾನ್, ಅಜಯ್ ರಾಮಸಾಲಿ, ಹುಲಿರಾಜ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment