ಕಾರುಗಳ ಡಿಕ್ಕಿ: ಓರ್ವ ಸಾವು

ಗುಬ್ಬಿ, ಆ. ೨೫- ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತ್ಯಾಗಟೂರು ಗೇಟ್ ಬಳಿ ನ‌ಡೆದಿದೆ.

ಹಾಲುಗೋಣ ಗ್ರಾಮದ ರುದ್ರೇಶ್ (42) ಎಂಬುವರೇ ಮೃತಪಟ್ಟಿರುವ ದುರ್ದೈವಿ. ತಾಲ್ಲೂಕಿನ ನಿಟ್ಟೂರು ಹೋಬಳಿ ತ್ಯಾಗಟೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ರುದ್ರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪಿಎಸ್ಐ ಗಂಗಾಧರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment