ಕಾರು ಡಿಕ್ಕಿ: ಪಾದಚಾರಿ ಸಾವು

ತುಮಕೂರು, ಜು. ೧೧- ಎರಡು ಕಾರುಗಳು ‌ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಭೀಮಸಂದ್ರದಲ್ಲಿ ನಡೆದಿದೆ.

ಸೋನು (29) ಎಂಬುವರೇ ಮೃತಪಟ್ಟಿರುವ ದುರ್ದೈವಿ. ಇವರು ನಗರದ ಹೊರವಲಯದ ಭೀಮಸಂದ್ರದಲ್ಲಿ ರಸ್ತೆ ದಾಟುತ್ತಿದ್ದಾಗ ತುಮಕೂರು ಕಡೆಯಿಂದ ಬಂದ ಕಾರು ಅಪ್ಪಳಿಸಿದೆ. ಇದರಿಂದ ಅವರು ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಅದೇ ಸಮಯಕ್ಕೆ ತುಮಕೂರು ಕಡೆಯಿಂದ ಬಂದ ಇನ್ನೊಂದು ಕಾರು ಸೋನು ಅವರ ಕಾಲುಗಳ ಮೇಲೆ ಹರಿದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಸೋನು ಅವರನ್ನು ತಕ್ಷಣ ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಭೀಮಸಂದ್ರದ ಸಾಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment