ಕಾರು ಡಿಕ್ಕಿ: ಬೈಕ್ ಸವಾರ ಸಾವು

ತುರುವೇಕೆರೆ, ಡಿ. ೬- ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ನಡೆದಿದೆ.

ಮಲ್ಲದೇವನಹಳ್ಳಿ ಗ್ರಾಮದ ನಿವಾಸಿ ರಾಜಣ್ಣ (50) ಎಂಬುವರೇ ಮೃತಪಟ್ಟಿರುವ ದುರ್ದೈವಿ. ಇವರು ಗೃಹ ಪ್ರವೇಶದ ಆಹ್ವಾನ ಪತ್ರಿಕೆ ಮುದ್ರಣಕ್ಕಾಗಿ ಪಟ್ಟಣಕ್ಕೆ ಬಂದು ವಾಪಾಸ್ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹಿಂತಿರುಗುವಾಗ ತಿಪಟೂರು ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಿಂದ ಬಿದ್ದ ರಾಜಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ತುರುವೇಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

ಸುದ್ದಿ ತಿಳಿದ ಕೂಡಲೇ ಶಾಸಕ ಮಸಾಲಾ ಜಯರಾಮ್, ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ, ಸಿಪಿಐ ಮಹಮದ್ ಸಲೀಂ, ಎಸ್ಸೈ ಜಿ.ವಿ. ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment