ಕಾರು ಹರಿದು ಇಬ್ಬರು ಬಾಲಕಿಯರ ಸಾವು

ಚಿಕ್ಕಬಳ್ಳಾಪುರ, ನ.೨೨- ಕಾರು ಚಾಲಕನ ನಿಯಂತ್ರಣ ತಪ್ಪಿ ಹಲವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುರುಗಮಲೆ ಗ್ರಾಮದ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ರಕ್ಷಿತಾ (೧೪), ಛಾಯಾದೇವಿ (೧೧) ಮೃತ ಬಾಲಕಿಯರು. ಮೃತರು ನಿನ್ನೆ ಕಾರ್ತಿಕ ಸೋಮವಾರ ಇರುವುದರಿಂದ ಮುರುಗಮಲೆ ಮುಕ್ತಿನಾಥ ಬೆಟ್ಟದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ದಿಪೋತ್ಸವವನ್ನ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುವ ವೇಳೆ ಎದುರಿನಿಂದ  ಬಂದ ಕಾರು ಹಲವರ ಮೇಲೆ ಹರಿದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೃತರ ತಾಯಂದಿರಾದ ಪದ್ಮಮ್ಮ ಹಾಗೂ ಚಿಕ್ಕಮ್ಮ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲೇ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ.

Leave a Comment