ಕಾರ್ ಪಲ್ಟಿ

ಮಂಗಳೂರು, ಏ.೨೧- ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಬದಿ ಮಗುಚಿಬಿದ್ದ ಘಟನೆ ನಿನ್ನೆ ಸಂಜೆ ಪಣಂಬೂರು ಜಂಕ್ಷನ್ ಸಮೀಪ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಪ್ಟ್ ಕಾರ್ ಪಣಂಬೂರು ಜಂಕ್ಷನ್ ಸಮೀಪ ಏಕಾಏಕಿ ಅತೀವೇಗದ ಕಾರಣದಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಬದಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಮುಂದುವರಿದು ರಸ್ತೆಯ ಪಕ್ಕದ ಕಲ್ಲಿಗೆ ಗುದ್ದಿ ಚರಂಡಿಯಲ್ಲಿ ಪಲ್ಟಿ ಹೊಡೆದಿದೆ. ಕಾರಿನಲ್ಲಿ ಐವರು ವಿದ್ಯಾರ್ಥಿಗಳಿದ್ದು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಣಂಬೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment