ಕಾರ್ ಮೇಲೆ ಬಸ್ ಪಲ್ಟಿ ಹಲವರಿಗೆ ಗಂಭೀರ ಗಾಯ

ಮಂಗಳೂರು, ಆ.೧- ಕಾಂಟ್ರಾಕ್ಟ್ ಕ್ಯಾರಿಯೇಜ್ ಬಸ್ಸೊಂದು ಕಾರ್ ಮೇಲೆ ಉರುಳಿಬಿದ್ದು ಹಲವರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಪಡೀಲ್-ಕಣ್ಣೂರು ಬಳಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಬಸ್ ಪ್ರಯಾಣಿಕರು ಮತ್ತು ಕಾರ್‌ನಲ್ಲಿ ಸಂಚರಿಸುತ್ತಿದ್ದ ಒಟ್ಟು ೧೫ ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರಿನಿಂದ ನಗರಕ್ಕೆ ಬರುತ್ತಿದ್ದ ಅಸ್ಮಿತ್ ಹೆಸರಿನ ಬಸ್‌ನ ಟೈರ್ ಸಿಡಿದ ಪರಿಣಾಮ ಅದು ಡಿವೈಡರ್ ಮೇಲೇರಿ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತಕ್ಕೀಡಾಗಿದ್ದು ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ೧೩ ಮಂದಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಮೂವರಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ಅತೀವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Comment