ಕಿನ್ನಿಗೋಳಿ: ಸ್ಟುಡಿಯೋ ಬೆಂಕಿಗಾಹುತಿ

ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ಮಂಗಳೂರು, ಜೂ.೧೯- ಆಕಸ್ಮಿಕ ಬೆಂಕಿ ಅನಾಹುತದಿಂದಾಗಿ ಫೊಟೋ ಸ್ಟುಡಿಯೋ ಸಂಪೂರ್ಣ ಹೊತ್ತಿ ಉರಿದ ಘಟನೆ ನಿನ್ನೆ ತಡರಾತ್ರಿ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಜಂಕ್ಷನ್ ಬಳಿ ನಡೆದಿದೆ. ಪ್ರತಿಮಾ ಸ್ಟುಡಿಯೋ ಬೆಂಕಿಗಾಹುತಿಯಾಗಿದ್ದು ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ತಡರಾತ್ರಿ ೧೧ ಗಂಟೆಯ ಸುಮಾರಿಗೆ ಸ್ಟುಡಿಯೋ ಒಳಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಹೊಗೆಯೇಳಲು ಆರಂಭವಾಗಿದೆ. ಕೂಡಲೇ ಸ್ಥಳೀಯರು ಸ್ಟುಡಿಯೋ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಅವರು ತಕ್ಷಣವೇ ಅಗ್ನಿಶಾಮಕದಳಕ್ಕೆ ವಿಷಯ ತಿಳಿಸಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ ನಾಲ್ವರು ಸಿಬ್ಬಂದಿ ಕಟ್ಟಡದ ಮೇಲ್ಭಾಗಕ್ಕೆ ಹತ್ತಿದ್ದು, ಅಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಒಳಗಡೆ ಹೊತ್ತಿ ಉರಿದಿದ್ದು ಮೇಲ್ಛಾವಣಿ ಕುಸಿದುಬಿದ್ದಿದೆ. ಘಟನೆಯಲ್ಲಿ ನಾಲ್ವರು ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಗೊಂಡಿದ್ದು ಅವರನ್ನು ತಕ್ಷಣವೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಟುಡಿಯೋ ಮಾಲಕ ಸೇಸಪ್ಪ ಸಾಲಿಯಾನ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Comment