ಕೀಟನಾಶಕ ಸೇವಿಸಿ ಆಟೋ ಚಾಲಕ ಸಾವು

ಕುಣಿಗಲ್, ಆ. ೨೩- ಕೌಟುಂಬಿಕ ಸಮಸ್ಯೆಯಿಂದ ಬೇಸತ್ತಿದ್ದ ಆಟೋ ಚಾಲಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಸುರೇಶ್ (28) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಕೆಲ ದಿನಗಳ ಕಾಲ ತಾಲ್ಲೂಕು ಕಚೇರಿ ಸಮೀಪದ ಹೋಟೆಲ್‌ನಲ್ಲಿ ಮಾಣಿಯಾಗಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಈ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment