ಕುಖ್ಯಾತ ದನಗಳ್ಳರ ಸೆರೆ ಬಜ್ಪೆ ಪೊಲೀಸರ ಕಾರ್ಯಾಚರಣೆ

ಬಜ್ಪೆ, ಜು.೧೭- ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ್ದ ವೇಳೆ ಪೊಲೀಸರಿಗೆ ಸಿಗದೆ ತಲೆಮರೆಸಿದ್ದ ಇಬ್ಬರು ಕುಖ್ಯಾತ ದನಗಳ್ಳರನ್ನು ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದ ಪೊಲೀಸ್ ತಂಡ ನಿನ್ನೆ ವಶಕ್ಕೆ ಪಡೆದಿದೆ. ಬಂಧಿತರನ್ನು ಅಡ್ಡೂರು ನಿವಾಸಿ ಅಬ್ದುಲ್ ಮಜೀದ್ ಹಾಗೂ ಮುಸ್ತಫಾ ಎಂದು ಹೆಸರಿಸಲಾಗಿದೆ. ಇವರು ಸೋದರರಾಗಿದ್ದು ಜೊತೆಯಲ್ಲೇ ಅಕ್ರಮ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ಜೂನ್ ೧೩ರಂದು ಅಡ್ಡೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಬಜ್ಪೆ ಠಾಣಾ ಪೊಲೀಸರು ದಾಳಿ ನಡೆಸಿ ೧೬ ದನಗಳನ್ನು ಸ್ವಾಧೀನಪಡಿಸಿಕೊಂಡಿದ್ದರು. ಈ ವೇಳೆ ಸೋದರರು ಪರಾರಿಯಾಗಿದ್ದರು. ನಿನ್ನೆ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು, ಸುರತ್ಕಲ್ ಠಾಣೆಯಲ್ಲಿ ಒಂದು ಹಾಗೂ ಬಜ್ಪೆ ಪೊಲೀಸ್ ಠಾಣೆಯಲ್ಲಿ ೬ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment