ಕುಣಿಗೆ ಬಿದ್ದು ಅಜ್ಜಿ-ಮೊಮ್ಮಗಳು ಸಾವು

ರಾಯಚೂರು.ಮಾ.13- ಬಟ್ಟೆ ಒಗೆಯುವ ಸಂದರ್ಭದಲ್ಲಿ ಆಯತಪ್ಪಿ ಕಾಲು ಜಾರಿ ಕುಣಿಗೆ ಬಿದ್ದು ಅಜ್ಜಿ-ಮೊಮ್ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಬೈಲ್ ಮರ್ಚೆಡ್ ಮೂಲದ ಚನ್ನಮ್ಮ (65), ಯಲ್ಲಮ್ಮ (05) ಎಂದು ಗುರುತಿಸಲಾಗಿದೆ. ಗ್ರಾಮದ ಹೊರ ವಲಯದಲ್ಲಿ ಕುಣಿಯಲ್ಲಿ ಸಂಗ್ರಹಗೊಂಡಿದ್ದ ನೀರಿನಲ್ಲಿ ಬಟ್ಟೆ ಒಗೆಯುವ ಸಂದರ್ಭದಲ್ಲಿ ಯಲ್ಲಮ್ಮ ಆಯತಪ್ಪಿ ನೀರಿಗೆ ಬಿದ್ದಿದ್ದಾಳೆ. ಮೊಮ್ಮಗಳನ್ನು ರಕ್ಷಿಸಲು ಹೋದ ಚನ್ನಮ್ಮ ಈಜು ಬಾರದೇ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಮಾನ್ವಿ ಠಾಣಾ ಪಿಎಸ್ಐ ನೇತೃತ್ವದ ಸಿಬ್ಬಂದಿ ವರ್ಗ ಮೃತರ ಶವಗಳನ್ನು ಕುಣಿಯಿಂದ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕರ ಆಸ್ಪತ್ರೆಗೆ ರವಾನಿಸಿದ್ದು, ಘಟನಾ ಸ್ಥಳದಲ್ಲಿ ಮೃತ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಗ್ರಾಮಾಂತರ ಶಾಸಕರಾದ ತಿಪ್ಪರಾಜು ಹವಾಲ್ದಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಅಂತ್ಯಕ್ರಿಯೆಗೆ ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬ ಸದಸ್ಯರಿಗೆ ಸಾಂತ್ವನ ನೀಡಿದರು.

Leave a Comment