ಕೃಷ್ಣಾ ನದಿ ನೀರು ಹಂಚಿಕೆ ತೆಲಂಗಾಣದ ಮೇಲ್ಮನವಿ ಸುಪ್ರೀಂನಲ್ಲಿ ವಜಾ

ನವದೆಹಲಿ, ಜ. ೯- ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೃಷ್ಣಾ ನದಿ ನ್ಯಾಯಾಧೀಕರಣ ನೀಡಿದ್ದ ತೀರ್ಪು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅವಿಭಜಿತ ಆಂಧ್ರ ಪ್ರದೇಶಕ್ಕೆ ಹಂಚಿಕೆ ಮಾಡಿರುವ ನೀರನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಸಮಾನವಾಗಿ ಹಂಚಿಕೆ ಮಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳುವ ಮೂಲಕ ಕೃಷ್ಣಾ ನ್ಯಾಯಾಧೀಕರಣ ತೀರ್ಪನ್ನು ಎತ್ತಿ ಹಿಡಿದಿದೆ.
ಪ್ರತ್ಯೇಕ ರಾಜ್ಯವಾಗಿರುವ ಹಿನ್ನೆಲೆಯಲ್ಲಿ ತೆಲಂಗಾಣಕ್ಕೆ ಹೊಸದಾಗಿ ನೀರು ಹಂಚಿಕೆ ಮಾಡಬೇಕು ಎಂದು ತೆಲಂಗಾಣ ಸರ್ಕಾರ ನ್ಯಾಯಾಲಯದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.
ಆ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

Leave a Comment