ಕೆಎಸ್ಆರ್‌ಟಿಸಿ ಬಸ್ ಪಲ್ಟಿ– 15ಕ್ಕೂ ಹೆಚ್ಚು ಮಂದಿಗೆ ಗಾಯ, ಐವರು ಗಂಭೀರ

ಗದಗ,ಸೆ23- ಕೆಎಸ್ಆರ್‌ಟಿಸಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗೆ ಗಾಯವಾಗಿ, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ತಾಲೂಕಿನ ನಾರಾಯಣಪುರ ಬಳಿ ನಡೆದಿದೆ.
ಕಲಬುರಗಿ ಘಟಕಕ್ಕೆ ಸೇರಿದ ಕೆಎ-32 ಎಫ್-2387 ಸ್ಲೀಪರ್ ಬಸ್ ಕಲಬುರಗಿಯಿಂದ ಧಾರವಾಡಕ್ಕೆ ಹೊರಟಿತ್ತು. ಈ ಬಸ್ಸಿನಲ್ಲಿ ಒಟ್ಟು 32 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಚಾಲಕ ಬಸ್ ಚಲಾಯಿಸುವಾಗ ನಿದ್ದೆಗೆ ಜಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಬಸ್ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಮಂದಿಗೆ ಗಾಯವಾಗಿ, ಐವರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರಕಾರಿ ವಾಹನ ಪಲ್ಟಿ
ಈ ಘಟನೆ ನಡೆದ 100 ಮೀಟರ್ ಅಂತರದಲ್ಲಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಕೂಡ ಪಲ್ಟಿಯಾಗಿದೆ. ಈ ಅಪಘಾತದಿಂದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಪಲ್ಟಿಯಾದ ಪರಿಣಾಮ ರಸ್ತೆ ತುಂಬೆಲ್ಲಾ ತರಕಾರಿ ಚೆಲ್ಲಾಪಿಲ್ಲಿ ಆಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.
ಸದ್ಯ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment