ಕೆಎಸ್ಸಾರ್ಟಿಸಿ ಬಸ್ ಚಾಲಕನಿಗೂ ಸೋಂಕು

ತುಮಕೂರು, ಮೇ ೨೫- ರಾಜ್ಯ ರಸ್ತೆ ಸಾರಿಗೆ ಬಸ್‌ನ ಚಾಲಕನಿಗೂ ಈಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಎಸ್ಸಾರ್ಟಿಸಿ ಬಸ್‌ಗಳ ಸಂಚಾರವೂ ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗಷ್ಟೆ ಬಸ್‌ಗಳ ಸಂಚಾರ ಆರಂಭವಾಗಿದ್ದು, ಕರ್ತವ್ಯಕ್ಕೆ ಹಾಜರಾಗುವ ಮುನ್ನ ಸದರಿ ಚಾಲಕನ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಇಂದು ಬಂದಿರುವ ಪರೀಕ್ಷಾ ವರದಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಸದರಿ ಕೆಎಸ್ಸಾರ್ಟಿಸಿ ಬಸ್ ಚಾಲಕ ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿಯ ಮಾವಿನಕಟ್ಟೆ ಗ್ರಾಮದವರಾಗಿದ್ದು, ಮಾಗಡಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಚಾಲಕನಿಗೆ ಸೋಂಕು ದೃಢಪಟ್ಟಿರುವುದರಿಂದ ಈತ ಕಾರ್ಯನಿರ್ವಹಿಸಿದ ದಿನಗಳಿಂದ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಸೋಂಕು ತಗುಲಿದೆಯೇ ಎಂಬ ಆತಂಕ ಈಗ ಎಲ್ಲರನ್ನು ಕಾಡುತ್ತಿದೆ.
ಸೋಂಕಿಗೆ ಒಳಗಾಗಿರುವ ಚಾಲಕನ ಮನೆಯವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮಾವಿನಕಟ್ಟೆ ಗ್ರಾಮವನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ.

.

Share

Leave a Comment