ಕೆಎಸ್‌ಆರ್‌ಟಿಸಿ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಆ. ೨೩- ಭಾರಿ ಮಳೆ ಮತ್ತು ಭೂ ಕುಸಿತದಿಂದಾಗಿ ಕರಾವಳಿ, ಮಲೆನಾಡು, ಕೊಡಗು ಮತ್ತು ಇನ್ನಿತರ ಸ್ಥಳಗಳು, ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಈ ತಿಂಗಳ 25 ಮತ್ತು 26 ರಂದು ಕೆಎಸ್‌ಆರ್‌ಟಿಸಿ ಹಮ್ಮಿಕೊಂಡಿದ್ದ ಮೇಲ್ವಿಚಾರಕರ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪರೀಕ್ಷೆಯನ್ನು ಸಂಸ್ಥೆ ಮುಂದೂಡಿದೆ.
ಸಾರಿಗೆ ಸಚಿವರು ಈ ಲಿಖಿತ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಾರಿಗೆ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಪರೀಕ್ಷಾ ದಿನಾಂಕವನ್ನು ಕೆಎಸ್‌ಆರ್‌ಟಿಸಿಯ ವೆಬ್‌ಸೈಟ್ www.ksrtcjobs.com ಮತ್ತು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದು ಹೇಳಿದ್ದಾರೆ.

Leave a Comment