ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ತುಮಕೂರು, ಮಾ. ೧೩- ನಗರದ ಗಾರೆ ನರಸಯ್ಯನ ಕಟ್ಟೆ ಕೆರೆಯಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೇಳೆಕೋಟೆ ವಾಸಿ ಗಾರೆ ಕೆಲಸಗಾರ ಗಂಗರಾಜು ಎಂದು ಗುರುತಿಸಲಾಗಿದೆ.
ಈತ ಕೆರೆ ದಂ‌ಡೆಯಲ್ಲಿ ಶೌಚಾಲಯಕ್ಕೆ ಹೋಗಿದ್ದಾಗ ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment