ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ ಪ್ರತಿಭಟನೆ

ಮೈಸೂರು, ಆ.13- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಾಗಿದೆ ಎಂದು ಆರೋಪಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಸೋಮವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಸಿಪಿಐ ಕರೆ ನೀಡಿದ್ದ ರಾಷ್ಟ್ರೀಯ ಪ್ರತಿಭಟನಾ ಆಂದೋಲನ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಪೊರೇಟ್ ಕಂಪನಿಗಳ ಪರವಾಗಿ ಬಿಜೆಪಿ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಜನಸಾಮಾನ್ಯರನ್ನು ಕಡೆಗಣಿಸುತ್ತಿದೆ ಎಂದು ದೂರಿದರು.
ಚುನಾವಣೆ ಸಂದರ್ಭದಲ್ಲಿ ದೇಶದ ಮತದಾರರಿಗೆ ನೀಡಿದ್ದ ಭರವಸೆಗಳು ಸುಳ್ಳಾಗಿವೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ನಾಲ್ಕು ವರ್ಷದ ಅವಧಿಯ ಆಡಳಿತದಲ್ಲಿ ವಿಫಲವಾಗಿದೆ.
ಹತ್ತಾರು ಸುಳ್ಳು ಭರವಸೆಗಳನ್ನು ನೀಡಿ ಧರ್ಮ ಜಾತಿ ಭಾವನೆಗಳನ್ನು ಬಿಜೆಪಿ ಸರ್ಕಾರ ಕೆರಳಿಸಿದೆ.
ಎಲ್ಲದಕ್ಕೂ ತೆರಿಗೆ ಏರಿಸಿ ಜನರ ಜೇಬು ಖಾಲಿ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Leave a Comment