ಕೇರಳದಿಂದ ಬಂದಿರುವ ಇಬ್ಬರು ಶಂಕಿತ ಉಗ್ರರ ಬಂಧನ

ಉಡುಪಿ.ಜ.೧೪.ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ನಸುಕಿನ ವೇಳೆ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜ್ಞಾತ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಂಕಿತ ಉಗ್ರರ ಬಂಧನ ಸುದ್ದಿಯನ್ನು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಬಂಧಿತರ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ.

Leave a Comment