ಕೈ ತಪ್ಪಿದ ಟಿಕೇಟ್ – ಕಾಂಗ್ರೆಸ್ ಕಛೇರಿಗೆ ನುಗ್ಗಿ ದಾಂಧಲೆ

ಮಂಡ್ಯ, ಏ.16- ಕಾಂಗ್ರೆಸ್ ಟಿಕೇಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಗಣಿಗ ರವಿಕುಮಾರ್ ಬೆಂಬಲಿಗರು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ನುಗ್ಗಿ ದಾಂಧಲೆ ನಡೆಸಿ ಕಛೇರಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಗರದ ಬಂದಿಗೌಡ ಬಡಾವಣೆಯಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷ ಹಾಲಿ ಶಾಸಕ ಅಂಬರೀಷ ಅವರಿಗೆ ಟಿಕೇಟ್ ಘೋಷಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗಣಿಗ ರವಿಕುಮಾರ್ ಬೆಂಬಲಿಗರು ಕಾಂಗ್ರೆಸ್ ಕಛೇರಿಗೆ ನುಗ್ಗಿ ದಾಂಧಲೆ ನಡೆಸಿದರು.
ಸಕ್ರಿಯ ಕಾಂಗ್ರೆಸ್ ಮುಖಂಡರಾಗಿರುವ ಗಣಿಗ ರವಿಕುಮಾರ್ ರವರು ಪಕ್ಷದ ಸಂಘಟನೆ ಹಾಗೂ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದರು. ಅಂಬರೀಷ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿಲ್ಲೇ ಕೊನೆ ಗಳಿಗೆಯಲ್ಲಿ ಅವರನ್ನೇ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಪಕ್ಷ ನಿಷ್ಠಾವಂತ ಕಾರ್ಯಕರ್ತರಿಗೆ ದ್ರೋಹವೆಸಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಕಛೇರಿಯಲ್ಲಿನ ಕುರ್ಚಿ, ಬ್ಯಾನರ್, ಬಂಟಿಂಗ್ಸ್ ಗಳನ್ನು ಕಿತ್ತು ಹಾಕಿರುವ ಗಣಿಗ ರವಿಕುಮಾರ್ ಬೆಂಬಲಿಗರು ರವಿಕುಮಾರ್ ರವರಿಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದರಲ್ಲದೆ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Leave a Comment