ಕೊಕೇನ್ ಮಾರಾಟ ಆರೋಪಿ ಸೆರೆ

ಬೆಂಗಳೂರು, ಡಿ. ೭- ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 25 ಸಾವಿರ ರೂ. ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಸವನಗುಡಿಯ ಮೋಹಿನ್ (28) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 2 ಗ್ರಾಂ ಕೊಕೇನ್, ಮೊಬೈಲ್ ವಶಪಡಿಸಿಕೊಂಡು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಪುಟ್ಟೇನಹಳ್ಳಿಯ 18ನೇ ಕ್ರಾಸ್‌ನ ರಸ್ತೆಯಲ್ಲಿ ಆರೋಪಿಯು ಕೊಕೇನ್ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Leave a Comment