ಕೊಡಗು ಅತಿವೃಷ್ಟಿ; ಫಲಾನುಭವಿಗಳಿಗೆ ಪರಿಹಾರ ವಿತರಣೆಯ ಮಾಹಿತಿ ಕೋರಿ ಸಿಎಂಗೆ ಡಿವಿಎಸ್ ಪತ್ರ

ಬೆಂಗಳೂರು, ಜೂ 13- ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಅತಿವೃಷ್ಟಿ ಪರಿಹಾರ ಕಾರ್ಯಕ್ರಮಗಳಲ್ಲಿ  ಫಲಾನುಭವಿಗಳಿಗೆ ವಿತರಿಸಿರುವ ಪರಿಹಾರದ ಮಾಹಿತಿ  ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ.

ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು, ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದಲ್ಲಿ  ಮೂಲಭೂತ ಸೌಕರ್ಯಗಳು ಹಾಗೂ ಮನೆಗಳ ನಿರ್ಮಾಣ ಕಾಮಗಾರಿಗಳ ಪ್ರಗತಿ ಯಾವ ಹಂತದಲ್ಲಿವೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿರುವ ಬಗ್ಗೆ ಪೂರ್ಣ ಮಾಹಿತಿಯನ್ನು ಒದಗಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಕೋರಿದ್ದಾರೆ.

ಅತಿವೃಷ್ಟಿ ಪರಿಹಾರ ಕಾರ್ಯ ಸಂಬಂಧ ಕೇಂದ್ರ ಸರ್ಕಾರದಿಂದ ಪಡೆಯಬಹುದಾದ ಅನುದಾನ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲು ತಮ್ಮ ಹಂತದಲ್ಲಿ ರಾಜ್ಯದ ಕೇಂದ್ರ ಸಚಿವರ ಸಭೆಯನ್ನು ಕರೆಯಲು ದಿನಾಂಕವನ್ನು ಗೊತ್ತುಪಡಿಸಲು ಮತ್ತೊಮ್ಮೆ ಪತ್ರದ ಮೂಲಕ ಕೋರಿದ್ದಾರೆ.

 

Leave a Comment