ಕೊರೊನಾ : ಕ್ವಾರಂಟೈನ್ ಅವಧಿ ಏಳು ದಿನಕ್ಕೆ ಇಳಿಕೆ

ನವದೆಹಲಿ ಮೇ 26-ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಬೆನ್ನಲ್ಲೇ ಕ್ವಾರಂಟೈನ್ ಅವಧಿಯನ್ನು ಏಳು ದಿನಕ್ಕೆ ಇಳಿಕೆ ಮಾಡಿದ್ದು ವಂದೇ ಭಾರತ್ ಕಾರ್ಯಕ್ರಮದಡಿ ತವರಿಗೆ ವಾಪಸಾದವರಿಗೆ ಪ್ರತ್ಯೇಕತಾ ಅವಧಿಯನ್ನು ಇಳಿಕೆ ಮಾಡಿ ಕೇಂದ್ರ ಗೃಹ ಇಲಾಖೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಬೆನ್ನಲ್ಲೇ ಕ್ವಾರಂಟೈನ್ ಅವಧಿ ಏಳು ದಿನಕ್ಕೆ ಇಳಿಕೆ ಮಾಡಿ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಂತರದ ಏಳು ದಿನ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸೂಚಿಸಿದೆ. ಜೊತೆಗೆ ಕೊರೊನಾದಿಂದ ಗುಣಮುಖರಾದವರನ್ನು 10 ದಿನದಲ್ಲಿ ಆಸ್ಪತ್ರೆಯಿಂದ ವಾಪಸ್ ಕಳುಹಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಕೊರೊನಾ ಸೋಂಕಿಗೆ ತುತ್ತಾದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾದ 10 ದಿನದಲ್ಲಿ ವ್ಯಕ್ತಿಯನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಬಹುದಾಗಿದ್ದು, ನಂತರ ಆ ವ್ಯಕ್ತಿ 14 ದಿನ ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು ಎಂದು ಮಾರ್ಗಸೂಚಿ ತಿಳಿಸಿದೆ.

ಕೇಂದ್ರ ಗೃಹ ಇಲಾಖೆ ಮಂಗಳವಾರ ಈ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕೊರೊನಾ ರೋಗದಿಂದ ಗುಣಮುಖನಾದ ವ್ಯಕ್ತಿಯನ್ನು 10 ದಿನದಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ, ಆದರೆ ಡಿಸ್ಚಾರ್ಜ್ ಸಂದರ್ಭದಲ್ಲಿ ವ್ಯಕ್ತಿಗೆ ಕೊರೊನಾ ಲಕ್ಷಣ ಇರಬಾರದು, ಡಿಸ್ಚಾರ್ಜ್ ವೇಳೆ ನೆಗೆಟಿವ್ ವರದಿ ಬಂದರೆ ಮಾತ್ರ ವ್ಯಕ್ತಿಯನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗುತ್ತದೆ ಎಂದು ಕೇಂದ್ರ ಗೃಹ ಇಲಾಖೆಯ ಪರಿಷ್ಕೃತ ಮಾರ್ಗಸೂಚಿ ತಿಳಿಸಿದೆ

Share

Leave a Comment