ಕೊರೊನಾ : ಮನೆಯಲ್ಲಿಯೇ ಅಂಬೇಡ್ಕರ್ ಜಯಂತಿ

ರಾಯಚೂರು.ಏ.07- ಕೊರೊನಾ ಹಿನ್ನೆಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ 127ನೇ ಜಯಂತ್ಯೋತ್ಸವ ಕಾರ್ಯಕ್ರಮ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅವರವರ ಮನೆಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅಂಬೇಡ್ಕರ್ ಸೇನೆ ಜಿಲ್ಲಾ ಸಮಿತಿ ಮನವಿ ಮಾಡಿದೆ.
ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಇದನ್ನು ತಡೆಯುವ ಉದ್ದೇಶದಿಂದ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಜಿಲ್ಲೆಯಾದ್ಯಂತ ಅವರವರ ಮನೆಗಳಲ್ಲಿ ಆಚರಿಸಲು ಸೂಚಿಸಲಾಗಿದೆ.
ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ, ಬಂದೇ ನವಾಜ್, ಮಹೇಶಕುಮಾರ ಉಪಸ್ಥಿತರಿದ್ದರು.

Leave a Comment