ಕೊರೊನಾ ಯೋಧರಿಗಾಗಿ ಸಿಎಂ ಉಪವಾಸ

ಬೆಂಗಳೂರು : ಇಂದು ಬಿಜೆಪಿ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಬಿಜೆಪಿ ಮುಂದಾಗಿದ್ದು, ಕೊರೊನಾ ಯೋಧರಿಗಾಗಿ ಒಪ್ಪೊತ್ತಿನ ಉಪವಾಸ ನಡೆಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪಕ್ಷದ ಕಾರ್ಯಕರ್ತರಿಗೆ ಕರೆನೀಡಿದ್ದಾರೆ. ಅದರಂತೆ ಸಿಎಂ ಯಡಿಯೂರಪ್ಪ ಕೂಡ ಒಪ್ಪೊತ್ತಿನ ಉಪವಾಸ ನಡೆಸುವುದಾಗಿ ತಿಳಿಸಿದ್ದಾರೆ.

ಕೊರೊನಾ ಸೋಂಕು ವಿರುದ್ಧ ವೈದ್ಯರು, ಪೊಲೀಸರು, ದಾದಿಯರು ಹಾಗೂ ಆಶಾ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ದೇಶವೇ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು ಇಂತಹ ಸಂದರ್ಭದಲ್ಲಿ ಒಪ್ಪೊತ್ತಿನ ಉಪವಾಸ ನಡೆಸುವ ಮೂಲಕ ಕೊರೊನಾ ವಿರುದ್ಧ ಹೋರಾಟ ನಡೆಸುವವರಿಗೆ ಗೌರವ ಸೂಚಿಸಬೇಕು ಎಂಬುದು ಬಿಜೆಪಿಯ ಉದ್ಧೇಶವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಸಂದೇಶದ ಮೂಲಕ ಬಿಜೆಪಿ ಕಾರ್ಯಕರ್ತರು ಒಪ್ಪೊತ್ತಿನ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ…

Leave a Comment