ಕೊರೊನಾ ಸೋಂಕಿನಿಂದ ವೈದ್ಯ ಗುಣಮುಖ

 

ಕಲಬುರಗಿ,ಮೇ.26-ಕೊರೊನಾ ಸೋಂಕಿನಿಂದ ಗುಣಮುಖರಾದ ನಗರದ ಖೂಬಾ ಪ್ಲಾಟ್ ನ 45 ವರ್ಷದ ವೈದ್ಯ (ಪಿ-926)ನನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆ 848ರ ಸಂಪರ್ಕದಿಂದ ವೈದ್ಯನಿಗೆ ಸೋಂಕು ತಗುಲಿತ್ತು. ಮೇ.13 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇನ್ನುಳಿದಂತೆ ಜಿಲ್ಲೆಯಲ್ಲಿ ಇಂದು ಹೊಸದಾಗಿ ಒಂದೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲೇಟಿನ್ ನಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 157 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ 73 ಜನ ಗುಣಮುಖರಾಗಿದ್ದಾರೆ. 7 ಜನ ನಿಧನ ಹೊಂದಿದ್ದು, ಉಳಿದಂತೆ 77 ಜನರಿಗೆ ಚಿಕಿತ್ಸೆ ಮುಂದುವರಿದಿದೆ.

Share

Leave a Comment