ಕೊರೊನಾ ೨ ಕೋಟಿ ರೂ ದೇಣಿಗೆ ನೀಡಿದ ನಟ ಕಲ್ಯಾಣ್

ಹೈದರಾಬಾದ್, ಮಾ ೨೬- ಆಂಧ್ರ ಪ್ರದೇಶದಲ್ಲಿ ಕೊರೊನಾ ಸೋಂಕು ತಡೆಗೆ ಟಾಲಿವುಡ್ ನಟರು ಕೈಜೋಡಿಸಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.
ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ ಪವನ್ ಕಲ್ಯಾಣ್ ನೆರವಿನ ಹಸ್ತ ಚಾಚಿದ್ದಾರೆ. ಅವರು ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿ ಒಟ್ಟು ೨ ಕೋಟಿ ರೂ. ದೇಣಿಗೆ ನೀಡಲು ಮುಂದಾಗಿದ್ದಾರೆ
ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ತಲಾ ೫೦ ಲಕ್ಷ ರೂ.ನಂತೆ ೧ ಕೋಟಿ ರೂ. ದೇಣಿಗೆ ನೀಡುತ್ತೇನೆ. ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದು ಕೋಟಿ ನೀಡಲು ನಿರ್ಧರಿಸಿದ್ದೇನೆ ಎಂದು ಪವನ್ ಕಲ್ಯಾಣ್ ಟ್ವೀಟ್ ಮಾಡಿದ್ದಾರೆ.
ಇನ್ನೊಂದೆಡೆ ಪವನ್ ಕಲ್ಯಾಣ್ ಅವರು ಕೇಂದ್ರ ಸರ್ಕಾರದ ಸಂದೇಶ ಮತ್ತು ಸಲಹೆಯನ್ನು ಸ್ವಾಗತಿಸಿರುವ ಅವರು, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇನೆ. ಜನಸೇನಾ ಪಕ್ಷದ ಮುಖ್ಯಸ್ಥರು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆ ಪ್ರಧಾನಿ ಮೋದಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಪವನ್ ಕಲ್ಯಾಣ್ ಅವರು ಸಿನಿಮಾ ಕ್ಷೇತ್ರಕ್ಕೆ ಪುನರಾಗಮನ ಮಾಡಿದ್ದು, ಮುಂಬರುವ ಅವರ ‘ವಕೀಲ್ ಸಾಬ್’ ಚಿತ್ರವನ್ನು ವೇಣು ಶ್ರೀರಾಮ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಂಜಲಿ ಮತ್ತು ನಿವೇತಾ ಥಾಮಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Leave a Comment