ಕೊಲ್ಲೂರು: ನವರಾತ್ರಿ ಉತ್ಸವಕ್ಕೆ ಚಾಲನೆ

ಕೊಲ್ಲೂರು, ಅ.೧೧- ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಿನ್ನೆ ಗಣಪತಿ ಪೂಜೆ, ಕಳಶ ಸ್ಥಾಪನೆಯೊಂದಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿನ್ನೆ ಚಾಲನೆ ನೀಡಲಾಯಿತು.
ಅರ್ಚಕರಾದ ಕೆ.ಎನ್. ಗೋವಿಂದ ಅಡಿಗ ಹಾಗೂ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ರಮೇಶ್ ಗಾಣಿಗ,ನರಸಿಂಹ ಹಳಗೇರಿ, ರಾಜೇಶ್ ಕಾರಂತ, ಅಭಿಲಾಷ್, ಜಯಂತಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ ಮತ್ತಿತರರು ಉಪಸ್ಥಿತರಿದ್ದರು.
ಅ.೧೯ರಂದು ಇಲ್ಲಿನ ಸರಸ್ವತಿ ಮಂಟಪದಲ್ಲಿ ಅಕ್ಷರಾಭ್ಯಾಸ ನಡೆಯಲಿದ್ದು, ಪ್ರತಿದಿನ ವಿವಿಧ ರಾಜ್ಯಗಳ ಆಯ್ದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Comment