ಕೋಚ್ ರವಿಶಾಸ್ತ್ರಿ ಅವಧಿ ವಿಸ್ತರಣೆ

ಬರ್ಮಿಂಗ್ ಹ್ಯಾಮ್, ಜು ೧೨- ಭಾರತ ತಂಡದ ಮುಖ್ಯ ತರಬೇತುದಾರ ರವಿಶಾಸ್ತ್ರಿ ಸೇರಿದಂತೆ ಕೋಚಿಂಗ್ ಸಿಬ್ಬಂದಿಗಳ ಅವಧಿಯನ್ನು ಬಿಸಿಸಿಐ ಇನ್ನು ೪೫ ದಿನಗಳವರೆಗೂ ವಿಸ್ತರಿಸಿದೆ. ಆದರೆ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಅವಧಿ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದು ತಿಳಿದು ಬಂದಿದೆ.

ಕಳೆದ ಒಂದೂವರೆ ವರ್ಷದಿಂದ ಭಾರತ ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಜತೆಗೆ, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಕೂಡ ತಂಡದ ಕ್ಷೇತ್ರ ರಕ್ಷಣೆಯಲ್ಲಿ ಗುಣಮಟ್ಟ ಹೆಚ್ಚಿಸಿದ್ದಾರೆ. ಆದರೆ. ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ನಾಲ್ಕನೇ ಬ್ಯಾಟಿಂಗ್ ಕ್ರಮಾಂಕ ಯಶಸ್ವಿಯಾಗಲಿಲ್ಲ ಎಂದು ಬಿಸಿಸಿಐ ಅಸಮಾಧಾನ ಹೊಂದಿದೆ.

ಐಸಿಸಿ ವಿಶ್ವಕಪ್ ಅಲ್ಲದೇ, ಕಳೆದ ಹಲವು ಆವೃತ್ತಿಗಳಿಂದ ಭಾರತ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ನಲ್ಲಿನ ಬದಲಾವಣೆಗಳು ನಡೆಯುತ್ತಲೇ ಇವೆ. ಆದರೂ. ಇದುವರೆಗೂ ಈ ಸಮಸ್ಯೆ ಬಗೆಹರಿದಿಲ್ಲ. ಆದರೆ, ಸಂಜಯ್ ಬಂಗಾರ್ ಅವರು ಈ ಸಮಸ್ಯೆ ಬಗೆಹರಿಸುವ ಬಗ್ಗೆ ಉತ್ಸಾಹ ತೋರಿಲ್ಲ. ಆಲ್ ರೌಂಡರ್ ವಿಜಯ್ ಶಂಕರ್ ಅವರು ಹೊರಗುಳಿಯುವ ಮುನ್ನವೇ ಫಿಟ್ ಆಗಿದ್ದರು ಎಂದು ಬಂಗಾರ್ ಹೇಳಿದ್ದರು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

Leave a Comment