ಕೋಳಿಫಾರಂ ತೆರವಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ದಾವಣಗೆರೆ, ಆ, 8 -ನೊಣಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕೆಂಚನಹಳ್ಳಿ ಗ್ರಾಮದಲ್ಲಿರುವ ಕೋಳಿಫಾರಂನಿಂದ ನೊಣಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಕೋಳಿಫಾರಂ ತೆರವುಗೊಳಿಸಬೇಕೆಂದು ಒತ್ತಾಯಿಸಿ ಅಧಿಕಾರಿಗಳಿಗೆ ದೂರು ನೀಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇದರಿಂದಾಗಿ ನಮಗೆ ಬೇಸರ ಉಂಟಾಗಿದೆ. ಅಧಿಕಾರಿಗಳು ಯಾವುದೇ ರೀತಿಯ ಪರಿಹಾರ ನೀಡಿಲ್ಲ, ಅಧಿಕಾರಿಗಳ ಕ್ರಮ ಖಂಡನೀಯ. ಈ ಕೂಡಲೇ ಕೋಳಿಫಾರಂ ತೆರವುಗೊಳಿಸಿ ನಮಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕಲ್ಲೇಶ್ ಕೆ.ಜಿ,ಶಶಿಕಲಾ, ಮಂಜುನಾಥ್, ಲತಾ, ಶಂಕರಮ್ಮ, ಮಂಜುನಾಥ್, ಲಲಿತಮ್ಮ, ಕೊಟ್ರೇಶಪ್ಪ, ಸುಮಾ, ವೀರಣ್ಣ ಮತ್ತಿತರರಿದ್ದರು.

Leave a Comment