ಕೌಟುಂಬಿಕ ಕಲಹ : ವ್ಯಕ್ತಿ ಆತ್ಮಹತ್ಯೆ

ವಿಜಯಪುರ,ಆ.29-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪೊಲೀಸ್ ಪರೇಡ್ ಮೈದಾನದ ಹತ್ತಿರ ಇರುವ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಹಾದೇವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿದ್ದು, ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ.

ಸುದ್ದಿ ತಿಳಿದು ಗಾಂಧಿಚೌಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment