ಕ್ರಿಕೆಟ್ ಬೆಟ್ಟಿಂಗ್: ಸೆರೆ

ಮಂಗಳೂರು, ಜೂ.೨೦: ಮೊಬೈಲ್ ಆಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಬೋಳೂರು ಮಿಶನ್ ಕಂಪೌಂಡ್ ನಿವಾಸಿ ಸುದೇಶ್(೨೬) ಬಂಧಿತ ಆರೋಪಿ.

ಆರೋಪಿಯು ನಿನ್ನೆ ನಡೆದ ವಿಶ್ವಕಪ್ ಕ್ರಿಕೆಟ್‌ನ ನ್ಯೂಝಿಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕ ನಡುವಿನ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ನಡೆಸುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುದೇಶ್‌ನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿಯಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸುತ್ತಿದ್ದನೆನ್ನಲಾದ ಸುಮಾರು ೨೪ ಸಾವಿರ ರೂ. ವೌಲ್ಯದ ಎರಡು ಮೊಬೈಲ್ ಫೋನ್‌ಗಳು ಹಾಗೂ ಬೆಟ್ಟಿಂಗ್ ಮೂಲಕ ಸಾರ್ವಜನಿಕರಿಂದ ಸಂಗ್ರಹಿಸಿದ ೯೦ ಸಾವಿರ ರೂ.ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment