ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

 

ಕಲಬುರಗಿ,ಮೇ.23-ಊಟಕ್ಕೆ ಚಿಕನ್ ಹಾಗೂ ಮೀನು ಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ ಘಟನೆ ಆಳಂದ ತಾಲ್ಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರೇಣುಕಾ ಕುಡಕೆ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ. ಕ್ವಾರಂಟೈನ್ ನಲ್ಲಿರುವ ಸೋಮನಾಥ ಸೋನಕಾಂಬಳೆ ಹಾಗೂ ಆತನ ಸಂಬಂಧಿಕರು ರೇಣುಕಾ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಸೋಮನಾಥ ಸೋನಕಾಂಬಳೆ ಅವರನ್ನು ಆಶಾ ಕಾರ್ಯಕರ್ತೆ ರೇಣುಕಾ ಕುಡುಕೆ ನೀಡಿದ ಮಾಹಿತಿ ಮೇಲೆ ಕಿಣ್ಣಿ ಅಬ್ಬಾಸ್ ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಬುಧವಾರ ಸಿದ್ದರಾಮ ಎನ್ನುವ ಮತ್ತೊಬ್ಬರನ್ನು ಕ್ವಾರಂಟೈನ್ ಕೇಂದ್ರಕ್ಕೆ ಬಿಡಲು ರೇಣುಕಾ ತೆರಳಿದ್ದರು. ಈ ವೇಳೆ ಸೋಮನಥ ನನಗೆ ಊಟಕ್ಕೆ ಚಿಕನ್, ಮೀನು ಹಾಗೂ ಮಕ್ಕಳಿಗೆ ಚಿಪ್ಸ್ ಕೊಡಿಸಿಲ್ಲ ಎಂದು ತಗಾದೆ ತೆಗೆದು ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment